ಭಾಲ್ಕಿ ಕ್ಷೇತ್ರದ ಆಸ್ಪತ್ರೆಯ ಪರಿಸಿಲನೆ ಈಶ್ವರ ಖಂಡ್ರೆ .ಬಡವರಿಗೆ ದವಸ ಧಾನ್ಯ ವಿತರಣೆ ಕರೋನಾ ವ್ಯೆರಸ್ ತಡೆಗಟ್ಟಲು ಮುಂಜಾಗ್ರತೆ ಕ್ರಮ ಮಾಹಿತಿ .
ಬೀದರ ನ್ಯೂಸ್....
ಭಾಲ್ಕಿ ಸುದ್ದಿ...
ಹಲಬರ್ಗಾ, ಧನ್ನೂರಾ, ಕಣಜಿ ಪಿಹೆಚ್ ಸಿಗಳಿಗೆ ಶಾಸಕರಾದ ಶ್ರೀ ಈಶ್ವರ್ ಖಂಡ್ರೆ ಭೇಟಿ
ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಣೆ
ಕೊರೊನಾ ಹೋರಾಟದಲ್ಲಿ ವೈದ್ಯರ ಸೇವೆ ಅನನ್ಯ
ಭಾಲ್ಕಿ ತಾಲೂಕಿನ ಹಲಬರ್ಗಾ, ಧನ್ನೂರಾ(ಹೆಚ್), ಕಣಜಿ, ಹಾಲಹಳ್ಳಿ(ಕೆ), ಖಟಕ ಚಿಂಚೋಳಿ, ಡಾವರಗಾಂವ, ಕಟ್ಟಿತೂಗಾಂವ ಸೇರಿದಂತೆ ಮುಂತಾದ ಕಡೆಗಳಲ್ಲಿ ಶನಿವಾರ ಶಾಸಕರಾದ ಶ್ರೀ ಈಶ್ವರ ಖಂಡ್ರೆ ಭೇಟಿ ನೀಡಿ ಕೊರೊನಾ ಸೋಂಕು ನಿಯಂತ್ರಣದ ಕುರಿತು ಮಾಹಿತಿ ಕಲೆ ಹಾಕಿದರು
ಬೆಳಗ್ಗೆ ಹಲಬರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿ, ಆಶಾ ಕಾರ್ಯಕರ್ತೆಯರಿಗೆ ವೈಯಕ್ತಿಕವಾಗಿ ಆಹಾರದ ಕಿಟ್ ವಿತರಿಸಿದರು.
ಬಳಿಕ ಶಾಸಕರಾದ ಶ್ರೀ ಈಶ್ವರ್ ಖಂಡ್ರೆ ಮಾತನಾಡಿ, ಮಹಾಮಾರಿ ಕೋವಿಡ್ ೧೯ ಸೋಂಕು ಎಲ್ಲರ ನಿದ್ರೆಗೆಡಿಸಿದೆ. ಇಂತಹ ಸಂದರ್ಭದಲ್ಲಿ ವೈದ್ಯರು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಮನೆ, ಮಕ್ಕಳನ್ನು ಬಿಟ್ಟು ಕೊರೊನಾ ಹೋರಾಟದಲ್ಲಿ ತೊಡಗಿಸಿಕೊಂಡಿರುವುದು ಅವಿಸ್ಮರಣೆ, ಅನನ್ಯವಾಗಿದೆ ಎಂದು ಬಣ್ಣಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಥರ್ಮಾ ಸ್ಕ್ಯಾನರ, ಔಷಧಿ, ಸ್ಯಾನಿಟೈಸರ್ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿ ಕೊರೊನಾ ತಡೆಗೆ ಮುಂದಾಗಬೇಕು. ದಿನದ ೨೪ ಗಂಟೆ ದಣಿವರಿಯದ ಆಶಾ ಕಾರ್ಯಕರ್ತೆಯರ ಸೇವೆ ಗುರುತಿಸಿ ವೈಯಕ್ತಿಕವಾಗಿ ಆಹಾರದ ಕಿಟ್ ನೀಡಲಾಗುತ್ತಿದೆ ಎಂದು ತಿಳಿಸಿದರು
ಕಟ್ಟಿತೂಗಾಂವ ಚೆಕ್ ಪೋಸ್ಟ್ ಗೆ ಭೇಟಿ
ಇದೇ ವೇಳೆ ಶಾಸಕರಾದ ಶ್ರೀ ಈಶ್ವರ ಖಂಡ್ರೆ ಅವರು ಕಟ್ಟಿತೂಗಾಂವ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಲಾಕ್ ಡೌನ್ ಆದೇಶ ಪೂರ್ಣಗೊಳ್ಳುವ ವರೆಗೂ ಕರ್ತವ್ಯ ನಿರತ ಸಿಬ್ಬಂದಿಗಳು ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ಈ ಮಾರ್ಗದಿಂದ ಸಂಚರಿಸುವ ವಾಹನಗಳ ಮೇಲೆ ನಿಗಾ ಇಡಬೇಕು. ವಿಶೇಷವಾಗಿ ರಾತ್ರಿ ಪಾಳೆಯಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ತಹಸೀಲ್ದಾರ ಅಣ್ಣಾರಾವ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್, ಡಿವೈಎಸ್ಪಿ ಡಾ.ದೇವರಾಜ ಬಿ, ತಾಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನೀರಗೂಡೆ ಸೇರಿದಂತೆ ಹಲವರು ಇದ್ದರು.
ವರದಿಗಾರರು...
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

- ಕೋವಿಡ್ ೧೯ ಸೋಂಕು ತಡೆಗೆ ಇದು ವರೆಗೂ ನಿರ್ದಿಷ್ಟ ಔಷಧಿ ಕಂಡು ಹಿಡಿಯಲ್ಲ ಸಾಧ್ಯವಾಗಿಲ್ಲ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದರಿಂದ ಒಬ್ಬರಿಂದ ಮತ್ತೊಬ್ಬರಿಗೆ ತಗಲುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ಜನರ ಮಾಹಿತಿ ಕಲೆ ಹಾಕಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡುವಂತೆ ಸಲಹೆ ನೀಡಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಥರ್ಮಾ ಸ್ಕ್ಯಾನರ, ಔಷಧಿ, ಸ್ಯಾನಿಟೈಸರ್ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿ ಕೊರೊನಾ ತಡೆಗೆ ಮುಂದಾಗಬೇಕು. ದಿನದ ೨೪ ಗಂಟೆ ದಣಿವರಿಯದ ಆಶಾ ಕಾರ್ಯಕರ್ತೆಯರ ಸೇವೆ ಗುರುತಿಸಿ ವೈಯಕ್ತಿಕವಾಗಿ ಆಹಾರದ ಕಿಟ್ ನೀಡಲಾಗುತ್ತಿದೆ ಎಂದು ತಿಳಿಸಿದರು
ಕಟ್ಟಿತೂಗಾಂವ ಚೆಕ್ ಪೋಸ್ಟ್ ಗೆ ಭೇಟಿ
ಇದೇ ವೇಳೆ ಶಾಸಕರಾದ ಶ್ರೀ ಈಶ್ವರ ಖಂಡ್ರೆ ಅವರು ಕಟ್ಟಿತೂಗಾಂವ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಲಾಕ್ ಡೌನ್ ಆದೇಶ ಪೂರ್ಣಗೊಳ್ಳುವ ವರೆಗೂ ಕರ್ತವ್ಯ ನಿರತ ಸಿಬ್ಬಂದಿಗಳು ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ಈ ಮಾರ್ಗದಿಂದ ಸಂಚರಿಸುವ ವಾಹನಗಳ ಮೇಲೆ ನಿಗಾ ಇಡಬೇಕು. ವಿಶೇಷವಾಗಿ ರಾತ್ರಿ ಪಾಳೆಯಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ತಹಸೀಲ್ದಾರ ಅಣ್ಣಾರಾವ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್, ಡಿವೈಎಸ್ಪಿ ಡಾ.ದೇವರಾಜ ಬಿ, ತಾಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನೀರಗೂಡೆ ಸೇರಿದಂತೆ ಹಲವರು ಇದ್ದರು.
ವರದಿಗಾರರು...
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

Comments
Post a Comment