ಆಲೆಕಲ್ಲು ಮಳೆಗೆ ಹಾನಿಯಾದ ಬೆಳೆಗೆ ಪರಿಹಾರ ನೀಡುವ ಭರವಸೆ ಈಶ್ವರ ಖಂಡ್ರೆ ಕೆಪಿಸಿಸಿ ಕಾರ್ಯಧ್ಯಕ್ಷ ಖಂಡ್ರೆ .ರೈತರಿಗೆ ರಕ್ಷಣೆ
ಬೀದರ ನ್ಯೂಸ್..
ಭಾಲ್ಕಿ ಸುದ್ದಿ:.....
ತೇಲಗಾಂವ ಗ್ರಾಮದ ರೈತರ ಹೊಲಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಭೇಟಿ || ಆಲೆಕಲ್ಲು ಮಳೆಗೆ ಹಾನಿಯಾದ ಬೆಳೆಗೆ ಪರಿಹಾರ ನೀಡಲು ಸೂಚನೆ
ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ರೈತರ ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಲು ಸರಕಾರಕ್ಕೆ ಒತ್ತಾಯ
ಭಾಲ್ಕಿ ತಾಲೂಕಿನ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ರೈತರ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ
ತಾಲೂಕಿನ ತೇಲಗಾಂವ ಗ್ರಾಮದ ವಂದನಾಬಾಯಿ ಗೋವಿಂದರಾವ ಪಾಟೀಲ್ ಎಂಬುವರ ಹೊಲ ಸೇರಿದಂತೆ ಮುಂತಾದ ಕಡೆಗಳಲ್ಲಿ ಮಂಗಳವಾರ ಭೇಟಿ ನೀಡಿ ಮಾತನಾಡಿದರು
ಕೋವಿಡ್ ೧೯ ಸೋಂಕಿಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಈ ಸೋಂಕು ನಿಯಂತ್ರಣಕ್ಕೆ ಇದು ವರೆಗೂ ನಿರ್ದಿಷ್ಟವಾದ ಔಷಧಿ ಕಂಡು ಹಿಡಿಯಲು ಸಾಧ್ಯವಾಗಿಲ್ಲ.
ಈ ಮಹಾಮಾರಿ ರೋಗ ತಡೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದ್ದು ಪ್ರತಿಪಕ್ಷಗಳು ಕೂಡ ಬೆಂಬಲಿಸಿವೆ.
ಲಾಕ್ ಡೌನ್ ನಿಂದ ರೈತರು ಸಂಕಷ್ಷದ ನಡುವೆ ಜೀವನ ನಡೆಸುತ್ತಿದ್ದಾರೆ. ರೈತರು ಬೆಳೆದ ಕೃಷಿ, ತೋಟಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ದರ ಸಿಗದೇ ನಷ್ಟ ಅನುಭವಿಸುತ್ತಿದ್ದಾರೆ. ರೈತರು ಬೇವರು ಸುರಿಸಿ ಹೊಲದಲ್ಲಿ ಬೆಳೆದ ಬೆಳೆಗಳಿಗೆ ಯಾರು ಕೇಳುವರು ಇಲ್ಲದಂತಾಗಿದೆ
ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ನಾನು ಹಾಗೂ ನಮ್ಮ ಬೆಂಬಲಿಗರು ಸಾಕಷ್ಟು ಕಡೆಗಳಲ್ಲಿ ತರಕಾರಿ, ಹಣ್ಣು ಖರೀದಿ ಮಾಡಿ ಸಮಸ್ಯೆಗೆ ಸ್ಪಂದಿಸುವ ಪ್ರಯತ್ನ ಮಾಡುತ್ತಿದ್ದೇವೆ
ಆದರೆ, ಇದು ಯಾವುದಕ್ಕೂ ಸಾಲುವುದಿಲ್ಲ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರಕಾರ ಗಮನ ಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಆಲೆಕಲ್ಲು ಮಳೆಗೆ ಹಿಂಗಾರು ಬೆಳೆ ಹಾನಿ, ಪರಿಹಾರಕ್ಕೆ ಸೂಚನೆ
ಪ್ರಸ್ತೂತ ವರ್ಷ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಕೃಷಿ ಹಾಗೂ ತೋಟಗಾರಿಕೆಯ ಬಹುತೇಕ ಬೆಳೆಗಳು ಆಲೆಕಲ್ಲು ಮಳೆ ಹೊಡೆತಕ್ಕೆ ನೆಲಕಚ್ಚಿವೆ.
ಇದರಿಂದಾಗಿ ವಿಶೇಷವಾಗಿ ರೈತರು ಬೆಳೆದ ತೊಗರಿ, ಕಡಲೆ, ಕುಸಬೆ, ತರಕಾರಿ, ಕಲ್ಲಂಗಡಿ ಸೇರಿದಂತೆ ಇತರೆ ಹಣ್ಣುಗಳು ಆಲೆಕಲ್ಲು ಮಳೆಗೆ ಹಾಳಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಹಾಗಾಗಿ ನಷ್ಟ ಆದ ಬೆಳೆಗಳ ಸಮೀಕ್ಷೆ ನಡೆಸಿ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ಪರಿಹಾರದಡಿ ರೈತರಿಗೆ ಪರಿಹಾರ ನೀಡಬೇಕು ಎಂದು ತಹಸೀಲ್ದಾರಗೆ ಶಾಸಕರು ಸೂಚನೆ ನೀಡಿದರು. ಜತೆಗೆ ರಾಜ್ಯ, ಕೇಂದ್ರ ಸರಕಾರ ಕೂಡ ಆಲೆಕಲ್ಲು ಮಳೆಗೆ ಆರ್ಥಿಕವಾಗಿ ಸಂಕಷ್ಟ ಅನುಭವಿಸಿದ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ತಹಸೀಲ್ದಾರ ಅಣ್ಣಾರಾವ ಪಾಟೀಲ್, ಡಿವೈಎಸ್ಪಿ ಡಾ. ದೇವರಾಜ ಬಿ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಲಕ್ಷ್ಮಿ ಇದ್ದರು.
ವರದಿಗಾರರು....
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

Comments
Post a Comment