ಉದ್ಯೋಗ ಖಾತ್ರಿ ಯೋಜನೆಯ ಜಾರಿಗೆ ಈಶ್ವರ ಖಂಡ್ರೆ ಭರವಸೆ ಭಾಲ್ಕಿ ಜನತೆಗೆ ಬಡತನ ನಿವಾರಣೆ ಸಲುವಾಗಿ
ಬೀದರ ನ್ಯೂಸ್...
ಭಾಲ್ಕಿ ಸುದ್ದಿ:....
*ಭಾಲ್ಕಿ ತಾಲೂಕಿನ ಉಚ್ಛಾ, ಮೊರಂಬಿ ಗ್ರಾಮಗಳಲ್ಲಿ ನರೇಗಾದಡಿ ಕಾಮಗಾರಿ ಪರಿಶೀಲಿಸಿದ ಶಾಸಕ ಖಂಡ್ರೆ || ಒಬ್ಬರಿಗೆ ಕನಿಷ್ಟ ೨೫ ದಿವಸ ಕೆಲಸ ಕೊಡಿ*
*೪೦ ಪಂಚಾಯಿತಿಗಳಲ್ಲಿ ನರೇಗಾದಡಿ ಕೆಲಸ ನೀಡಲು ಸೂಚನೆ*
*ಭಾಲ್ಕಿ* ತಾಲೂಕಿನ ಉಚ್ಛಾ ಹಾಗೂ ಮೊರಂಬಿ ಗ್ರಾಮಗಳಿಗೆ *ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದರು*
ಶನಿವಾರ ಅಧಿಕಾರಿಗಳ ತಂಡದೊಂದಿಗೆ ಶಾಸಕರು ಉಚ್ಛಾ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಚೆಕ್ ಡ್ಯಾಮ ಹಾಗೂ ಮೊರಂಬಿ ಗ್ರಾಮದ ಕುಡಿವ ನೀರಿನ ಟ್ಯಾಂಕ್ ಸಮೀಪ ಗಿಡ ನೆಡಲು ತೊಡುತ್ತಿರುವ ತಗ್ಗುಗಳನ್ನು ವೀಕ್ಷಿಸಿದರು.
ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕು ಹರಡುವಿಕೆ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಬಡ ಜನರು, ಕೂಲಿ ಕಾರ್ಮಿಕರು ಕೆಲಸ ಕಳೆದು ಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
*ಕ್ಷೇತ್ರದ ಬಡಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ನಾನು ಹಾಗೂ ನಮ್ಮ ಬೆಂಬಲಿಗರು ಆಹಾರದ ಪೊಟ್ಟಣ, ತರಕಾರಿ ಕಿಟ್ ನೀಡುವ ಮೂಲಕ ನೆರವಿಗೆ ಧಾವಿಸಲಾಗಿದೆ*
ಪಡಿತರ ಕಾರ್ಡ್ ಹೊಂದಿದ ಎಲ್ಲ ಫಲಾನುಭವಿಗಳು, ಕಾರ್ಡ್ ರಹಿತ ಎಲ್ಲ ಜನರಿಗೂ ಎರಡು ತಿಂಗಳ ಪಡಿತರ ಮುಂಗಡವಾಗಿ ನೀಡಲು ಕ್ರಮ ಜರುಗಿಸಲಾಗಿದೆ.
*ಜತೆಗೆ ಬಡವರು, ಕೂಲಿ ಕಾರ್ಮಿಕರು ಇಂತಹ ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವುದನ್ನು ಮನಗಂಡು ಎಲ್ಲ ೪೦ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನರೇಗಾದಡಿ ಪ್ರತಿ ಗ್ರಾಮ ಪಂಚಾಯಿತಿಯಿಂದ ಪ್ರತಿದಿನ ಕನಿಷ್ಟ ೨೫೦ ಜನರಿಗೆ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ ಯಾರು ಆತಂಕ ಪಡಬೇಕಿಲ್ಲ ಎಂದರು*
ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿದಿನ *೨೭೫ ರೂ ಯಂತೆ ಒಬ್ಬರಿಗೆ ಕನಿಷ್ಟ ೨೫ ದಿವಸ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಂಡು ವಹಿಸಿದ ಕೆಲಸ ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು*
ಕೋವಿಡ್ ೧೯ ಸೋಂಕು ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಆತಂಕವಿದೆ. ಹಾಗಾಗಿ *ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕಾಲಕಾಲಕ್ಕೆ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಂಡು ತಮ್ಮ ಅರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು*
ಈ ಸಂದರ್ಭದಲ್ಲಿ ತಹಸೀಲ್ದಾರ ಅಣ್ಣಾರಾವ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್ ಇದ್ದರು.
ವರದಿಗಾರರು.....
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ..

Comments
Post a Comment